Share News

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಕೆಜಿಎಫ್ (KGF) ಪೊಲೀಸ್ ಜಿಲ್ಲಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮಾದಕ ವಸ್ತುಗಳನ್ನು ಅಧಿಕೃತವಾಗಿ ನಾಶಪಡಿಸಲಾಗಿದೆ. ನ್ಯಾಯಾಲಯದ ಮಾರ್ಗಸೂಚಿಗಳ ಅನ್ವಯ ಹಾಗೂ ಡ್ರಗ್ಸ್ ವಿಲೇವಾರಿ ಸಮಿತಿಯ ಸಮ್ಮುಖದಲ್ಲಿ ಇಂದು ಈ ಕಾರ್ಯಾಚರಣೆ ನಡೆದಿದೆ.

​ವಿವಿಧ ಎನ್‌ಡಿಪಿಎಸ್ (NDPS) ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಗಾಂಜಾ ಸೇರಿದಂತೆ ಇನ್ನಿತರ ನಿಷೇಧಿತ ಮಾದಕ ವಸ್ತುಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಚೊಕ್ಕಹಳ್ಳಿ ಸರಹದ್ದಿನಲ್ಲಿರುವ ಕೆಐಎಡಿಬಿ (KIADB) ಕೈಗಾರಿಕಾ ಪ್ರದೇಶದಲ್ಲಿ ನಿಯಮಾನುಸಾರ ವಿಲೇವಾರಿ ಮಾಡಲಾಯಿತು.

​ಪರಿಸರಕ್ಕೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ವಹಿಸಿ, ನಿಗದಿತ ಕೈಗಾರಿಕಾ ಘಟಕದಲ್ಲಿ ವೈಜ್ಞಾನಿಕ ಮಾದರಿಯಲ್ಲಿ ಈ ಎಲ್ಲಾ ಮಾದಕ ವಸ್ತುಗಳನ್ನು ಸುಟ್ಟು ಭಸ್ಮ ಮಾಡಲಾಗಿದೆ. ಯುವ ಪೀಳಿಗೆಯನ್ನು ಮಾದಕ ವ್ಯಸನದಿಂದ ಮುಕ್ತಗೊಳಿಸಲು ಹಾಗೂ ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ ಮಾಡಲು ಕೆಜಿಎಫ್ ಪೊಲೀಸ್ ಜಿಲ್ಲಾ ಇಲಾಖೆಯು ನಿರಂತರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಈ ಸಂದರ್ಭದಲ್ಲಿ ಪೊಲೀಸ್ ಮೂಲಗಳು ತಿಳಿಸಿವೆ.


Share News