ಬೆಂಗಳೂರು: ಬಾಡಿಗೆ ಮನೆ ಪಡೆದು ಅಕ್ರಮವಾಗಿ ನಿಷೇಧಿತ ಹುಕ್ಕಾ ಬಾರ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಕುಂಬಳಗೋಡು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಜೀತ್ ನಾಯಕ್ ಹಾಗೂ ವರಣು ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:-
ಆರೋಪಿಗಳು ಸ್ಥಳೀಯ ನಿವಾಸಿ ಭಾಗ್ಯಮ್ಮ ಎಂಬುವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದುಕೊಂಡಿದ್ದರು. ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಸತಿ ಬಡಾವಣೆಯ ಮನೆಯಲ್ಲಿ ಕಾನೂನುಬಾಹಿರವಾಗಿ ಹುಕ್ಕಾ ಬಾರ್ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕುಂಬಳಗೋಡು ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದ್ದು, ಹುಕ್ಕಾ ಸೇದಲು ಬಳಸುತ್ತಿದ್ದ ವಿವಿಧ ಸಲಕರಣೆಗಳು ಹಾಗೂ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA