ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಅತ್ಯುತ್ತಮವಾಗಿ ನಿರ್ವಹಿಸಿ, ದಕ್ಷ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲಾ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ಐ.ಪಿ. ಮೇದಪ್ಪ ಅವರಿಗೆ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಬಿಂದುಮಣಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.
ಕೊಡಗು ಜಿಲ್ಲಾದ್ಯಂತ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಯುವಲ್ಲಿ ಡಿವೈಎಸ್ಪಿ ಐ.ಪಿ. ಮೇದಪ್ಪ ಅವರು ನಿರಂತರವಾಗಿ ಶ್ರಮಿಸಿದ್ದಾರೆ. ಅವರ ಈ ಅತ್ಯುತ್ತಮ ಸೇವೆಯನ್ನು ಗುರುತಿಸಿ, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಅವರು ಅಧಿಕೃತವಾಗಿ ಪ್ರಶಂಸನಾ ಪತ್ರ ಹಸ್ತಾಂತರಿಸಿ, ಶುಭ ಹಾರೈಸಿ ಅಭಿನಂದಿಸಿದರು.
ಇಲಾಖೆಯಲ್ಲಿ ಅವರ ದಕ್ಷತೆ ಮತ್ತು ಕರ್ತವ್ಯ ಬದ್ಧತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ಮತ್ತು ಅಭಿನಂದನೆಗಳು ವ್ಯಕ್ತವಾಗಿವೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA