ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಒಟ್ಟು 133 ಮೊಬೈಲ್ ಫೋನ್ಗಳು, 3 ಲ್ಯಾಪ್ಟಾಪ್ಗಳು ಮತ್ತು 1 ಟ್ಯಾಬ್ ಅನ್ನು ವಶಪಡಿಸಿಕೊಳ್ಳಲಾಗಿದೆ.
1. ಉತ್ತರ ವಿಭಾಗ :-
ಸಿ.ಇ.ಐ.ಆರ್ (CEIR) ಪೋರ್ಟಲ್ ಬಳಸಿಕೊಂಡು ಉತ್ತರ ವಿಭಾಗದ 13 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಅಥವಾ ಕಳುವಾಗಿದ್ದ 22.3 ಲಕ್ಷ ರೂ. ಮೌಲ್ಯದ 110 ಮೊಬೈಲ್ ಫೋನ್ಗಳನ್ನು ಪತ್ತೆಹಚ್ಚಲಾಗಿದೆ.
2. ಮೈಕೋಲೇಔಟ್ :-
ಮನೆಯೊಂದಕ್ಕೆ ಕಿಟಕಿಯ ಮೂಲಕ ನುಗ್ಗಿ ಕಳವು ಮಾಡಿದ್ದ ಇಬ್ಬರು ಹೊರರಾಜ್ಯದ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 23 ಮೊಬೈಲ್, 3 ಲ್ಯಾಪ್ಟಾಪ್ ಮತ್ತು 1 ಟ್ಯಾಬ್ ವಶಪಡಿಸಿಕೊಳ್ಳಲಾಗಿದೆ.
ಜಪ್ತಿ ಮಾಡಲಾದ ಒಟ್ಟು ಸೊತ್ತುಗಳ ಮೌಲ್ಯ ಸುಮಾರು 28.09 ಲಕ್ಷ ರೂಪಾಯಿಗಳಾಗಿವೆ. ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಕಳೆದುಕೊಂಡಲ್ಲಿ ಕೂಡಲೇ ಸಿ.ಇ.ಐ.ಆರ್ (CEIR) ಪೋರ್ಟಲ್ನಲ್ಲಿ ದಾಖಲಿಸಲು ಅಥವಾ ಪೊಲೀಸ್ ಠಾಣೆಗೆ ದೂರು ನೀಡಲು ಪೋಲಿಸ್ ಇಲಾಖೆ ತಿಳಿಸಿದೆ.
ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA