ಮೈಸೂರು: ಇಲ್ಲಿನ ಕರ್ನಾಟಕ ಪೊಲೀಸ್ ಅಕಾಡೆಮಿ (KPA) ಸಭಾಂಗಣದಲ್ಲಿ ಶುಕ್ರವಾರ ನಡೆದ ‘೮ನೇ ದಕ್ಷಿಣ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ–೨೦೨೬’ರ ಸಮಾರೋಪ ಸಮಾರಂಭ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್, ಐಪಿಎಸ್ ಅವರು ವಹಿಸಿ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಬಹುಮಾನ ಮತ್ತು ಪದಕಗಳನ್ನು ವಿತರಿಸಿ ಅಭಿನಂದಿಸಿದರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ (SP) ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಐಪಿಎಸ್ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA