ಮೈಸೂರು: ಮಧ್ಯಪ್ರದೇಶದಲ್ಲಿ ಕರ್ತವ್ಯ ನಿಮಿತ್ತ ತೆರಳಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಕಾಲಿಕವಾಗಿ ವಿಧಿವಶರಾದ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ (CEN) ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರವಿ ಕೆ.ಬಿ. ಅವರ ಪಾರ್ಥಿವ ಶರೀರಕ್ಕೆ ಇಂದು ಅವರ ಸ್ವಗ್ರಾಮದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಕರ್ತವ್ಯ ನಿಷ್ಠೆಗೆ ಹೆಸರಾಗಿದ್ದ ಅಧಿಕಾರಿ ರವಿ ಕೆ.ಬಿ. ಅವರ ಹಠಾತ್ ಅಗಲಿಕೆ ಪೊಲೀಸ್ ಇಲಾಖೆಗೆ ಹಾಗೂ ಅವರ ಕುಟುಂಬಕ್ಕೆ ತೀವ್ರ ಆಘಾತವನ್ನುಂಟುಮಾಡಿದೆ. ಮೈಸೂರು ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಡು, ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಸರ್ಕಾರಿ ಗೌರವದೊಂದಿಗೆ ಕಂಬನಿ ಮಿಡಿದರು.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಸ್ಥರಿಗೆ ಮತ್ತು ಆತ್ಮೀಯರಿಗೆ ಭಗವಂತ ನೀಡಲಿ ಎಂದು ಇಲಾಖೆ ಹಾಗೂ ಸಾರ್ವಜನಿಕರು ಪ್ರಾರ್ಥಿಸಿದ್ದಾರೆ.



Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA