ಮೈಸೂರು: ಮುಂಬರುವ 2026ರ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಗರದ ವಿವಿಧ ಭಾಗಗಳಲ್ಲಿ ತಾತ್ಕಾಲಿಕ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ರಹದಾರಿ (ಅನುಮತಿ) ನೀಡುವುದು ಹಾಗೂ ಅಗತ್ಯ ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಇಂದು ಮಹತ್ವದ ಸಮನ್ವಯ ಸಭೆ ಜರುಗಿತು.
ಡಿಸಿಪಿ ಡಾ. ಹರ್ಷ ಪ್ರಿಯಂವದಾ ಐಪಿಎಸ್ ಹಾಗೂ ಡಿಸಿಪಿ ಶ್ರೀ ಸುಂದರ್ ರಾಜ್ ಅವರ ಜಂಟಿ ಅಧ್ಯಕ್ಷತೆಯಲ್ಲಿ ಈ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯಲ್ಲಿ ಮೈಸೂರು ಮಹಾನಗರ ಪಾಲಿಕೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕಂ) ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯ ಮುಖ್ಯ ಚರ್ಚಾ ವಿಷಯಗಳು:
ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ: ಪಟಾಕಿ ಮಳಿಗೆಗಳ ಸ್ಥಾಪನೆಗೆ ಅನುಮತಿ ನೀಡುವ ಮುನ್ನ ಅಗ್ನಿಶಾಮಕ ಇಲಾಖೆ ಮತ್ತು ಪಾಲಿಕೆಯ ಸುರಕ್ಷತಾ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಅನುಸರಿಸುವುದು.
ಅಪಾಯ ರಹಿತ ವಾತಾವರಣ: ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ಸ್ಥಳ ನಿಯೋಜನೆ ಹಾಗೂ ತುರ್ತು ಪರಿಸ್ಥಿತಿ ಎದುರಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದರು.

Arakshakara Times Media
Related posts
