ರಾಮನಗರ: ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಜೆಯಲ್ಲಿ ಊರಿಗೆ ಬಂದಿದ್ದ ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ (ITBP) ಯೋಧರೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಕನಕಪುರ ಬೈಪಾಸ್ ರಸ್ತೆಯ ಗಡಸಳ್ಳಿ ಬಳಿ ತಡರಾತ್ರಿ ಸಂಭವಿಸಿದೆ.
ಕನಕಪುರ ತಾಲೂಕಿನ ಶಿವನಹಳ್ಳಿ ನಿವಾಸಿ, ಐಟಿಬಿಪಿ ಯೋಧ ಚನ್ನವೀರೇಗೌಡ (45) ಮೃತಪಟ್ಟ ದುರ್ದೈವಿ.
ಘಟನೆಯ ವಿವರ:
ಮೊನ್ನೆಯಷ್ಟೇ ರಜೆಯ ಮೇಲೆ ಸ್ವಗ್ರಾಮಕ್ಕೆ ಬಂದಿದ್ದ ಚನ್ನವೀರೇಗೌಡ ಅವರು ರಾತ್ರಿ ವೇಳೆ ತಮ್ಮ ಮಗನೊಂದಿಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಗಡಸಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ನೇರವಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡಿದ್ದ ಚನ್ನವೀರೇಗೌಡ ಅವರನ್ನು ತಕ್ಷಣವೇ ಕನಕಪುರ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
ಘಟನಾ ಸ್ಥಳಕ್ಕೆ ಕನಕಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕನಕಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Arakshakara Times Media
Related posts
