ರಾಣೇಬೆನ್ನೂರು: ಅಪ್ರಾಪ್ತ ಬಾಲಕನಿಗೆ ಕಾರು ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದ ವಾಹನ ಮಾಲೀಕನಿಗೆ ರಾಣೇಬೆನ್ನೂರಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ (JMFC) ನ್ಯಾಯಾಲಯವು 1 ದಿನದ ಸಾದಾ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಮೋಟಾರು ವಾಹನ ಕಾಯ್ದೆಯಡಿ ಅಪ್ರಾಪ್ತರಿಗೆ ವಾಹನ ನೀಡುವುದು ಗಂಭೀರ ಅಪರಾಧವಾಗಿದ್ದು, ಸಾರ್ವಜನಿಕರ ಜೀವಕ್ಕೆ ಅಪಾಯವನ್ನುಂಟು ಮಾಡುವ ಇಂತಹ ನಿರ್ಲಕ್ಷ್ಯದ ವಿರುದ್ಧ ನ್ಯಾಯಾಲಯವು ಈ ಕಟ್ಟುನಿಟ್ಟಿನ ಚಾಟಿ ಬೀಸಿದೆ.
ವಾಹನ ಮಾಲೀಕರು ತಮ್ಮ ಅಪ್ರಾಪ್ತ ಮಕ್ಕಳಿಗೆ ಅಥವಾ ಬಾಲಕರಿಗೆ ಯಾವುದೇ ಕಾರಣಕ್ಕೂ ವಾಹನಗಳನ್ನು ನೀಡಬಾರದು ಹಾಗೂ ಮೋಟಾರು ವಾಹನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಈ ತೀರ್ಪಿನ ಮೂಲಕ ನ್ಯಾಯಾಲಯವು ಸ್ಪಷ್ಟ ಸಂದೇಶ ರವಾನಿಸಿದೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA