ಸಾಲಿಗ್ರಾಮ: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಇಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟ್ ಆಟವಾಡುತ್ತಿದ್ದವರ ವಿರುದ್ಧ ಸಾಲಿಗ್ರಾಮ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ.
ಸಾಲಿಗ್ರಾಮ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಿನಹಳ್ಳಿ ಗ್ರಾಮದ ಬಳಿ ಕಾನೂನುಬಾಹಿರವಾಗಿ ಜೂಜಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ತಕ್ಷಣ, ಠಾಣಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ದಾಳಿ ನಡೆಸಿದರು.
₹7,650 ನಗದು ಜಪ್ತಿ:
ದಾಳಿಯ ವೇಳೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದ 10 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ₹7,650 ನಗದು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಜೂಜಾಟ ನಡೆಸುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಮುಂದುವರಿಯಲಿದೆ ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA
Related posts
