ಶಿವಮೊಗ್ಗ: ಶಾಲಾ ಕಟ್ಟಡಕ್ಕೆ ಅಗ್ನಿಶಾಮಕ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (NOC) ನೀಡಲು ₹1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.
ಬಂಧಿತ ಅಧಿಕಾರಿಯನ್ನು ಶಿವಮೊಗ್ಗ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್ ಕುಮಾರ್ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಶಿಕಾರಿಪುರ ಟೌನ್ನಲ್ಲಿರುವ ಶಾಲೆಯೊಂದರ ನೂತನ ಕಟ್ಟಡಕ್ಕೆ ಅಗ್ನಿಶಾಮಕ ದಳದಿಂದ ಕಡ್ಡಾಯವಾಗಿ ಪಡೆಯಬೇಕಾಗಿದ್ದ NOC ನೀಡಲು ಅಧಿಕಾರಿ ಅಶೋಕ್ ಕುಮಾರ್ ₹1 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಷ್ಟವಿಲ್ಲದ ಶಾಲೆಯ ಪ್ರತಿನಿಧಿ ಅನೂಪ್ ಎಂಬುವರು ಈ ಕುರಿತು ಶಿವಮೊಗ್ಗ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಲೋಕಾಯುಕ್ತರ ಮಿಂಚಿನ ಕಾರ್ಯಾಚರಣೆ:
ಸಲ್ಲಿಕೆಯಾದ ದೂರಿನ ಆಧಾರದ ಮೇಲೆ ಲೋಕಾಯುಕ್ತ ಪೊಲೀಸರು ಪಕ್ಕಾ ಯೋಜನೆ ರೂಪಿಸಿ ಟ್ರ್ಯಾಪ್ ಹೂಡಿದ್ದರು. ಸೆಪ್ಟೆಂಬರ್ 24 ರಂದು ದೂರುದಾರ అనೂಪ್ರಿಂದ ಅಶೋಕ್ ಕುಮಾರ್ ₹1 ಲಕ್ಷ ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತೆಯೇ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಅಧಿಕಾರಿಯನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಯಶಸ್ವಿ ದಾಳಿ:
ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಬಿ.ಪಿ. ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಇನ್ಸ್ಪೆಕ್ಟರ್ ವೀರಬಸಪ್ಪ ಹಾಗೂ ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಬಂಧಿತ ಅಧಿಕಾರಿಯಿಂದ ಲಂಚದ ಹಣವನ್ನು ಜಪ್ತಿ ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Arakshakara Times Media
Related posts
