ಶಿವಮೊಗ್ಗ: ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಬ್ಯಾಕೋಡ್ ವಲಯದ ಗೊರಗೋಡು ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳ ಪರಿಶೀಲನೆಯ ವೇಳೆ ತನಿಖಾಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಹಿರಿಯ ಅಧಿಕಾರಿಗಳು, ಕೊಲೆಗೆ ಕಾರಣ ಹಾಗೂ ಆರೋಪಿಗಳ ಸುಳಿವು ಕುರಿತು ಸಮಗ್ರ ಮಾಹಿತಿ ಪಡೆದುಕೊಂಡರು. ಅಲ್ಲದೆ, ತನಿಖೆಯನ್ನು ಕ್ಷಿಪ್ರಗೊಳಿಸಿ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಹಾಗೂ ಪ್ರಕರಣದ ಪ್ರತಿಯೊಂದು ಆಯಾಮದಲ್ಲೂ ಸೂಕ್ಷ್ಮ ತನಿಖೆ ನಡೆಸುವಂತೆ ಕಟ್ಟುನಿಟ್ಟಿನ ಸಲಹೆ-ಸೂಚನೆಗಳನ್ನು ನೀಡಿದರು.
ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ವಿವಿಧ ಕೋನಗಳಲ್ಲಿ ತನಿಖೆಯನ್ನು ಚುರುಕುಗೊಳಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಾನೂನು ಚೌಕಟ್ಟಿಗೆ ತರುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA