ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ನಕಲಿ ಇನ್‌ಸ್ಟಾಗ್ರಾಮ್ ಪ್ರೊಫೈಲ್ ಮೂಲಕ ವಂಚಿಸುತ್ತಿದ್ದ ಮೈಸೂರು ಮೂಲದ ಆರೋಪಿ ಆಕಾಶ್‌ನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಘಟನೆಯ ವಿವರ:
ಆರೋಪಿ ಆಕಾಶ್, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಹಾಗೂ ವೀಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದ ಮಹಿಳೆಯರ ಹೆಸರುಗಳಲ್ಲೇ ನಕಲಿ ಇನ್‌ಸ್ಟಾಗ್ರಾಮ್ (Instagram) ಐಡಿಗಳನ್ನು ಸೃಷ್ಟಿಸುತ್ತಿದ್ದ. ನಂತರ ಆ ಖಾತೆಗಳಿಂದ ಕಾಮುಕ ಸಂದೇಶಗಳನ್ನು ಕಳುಹಿಸಿ, ಆಕರ್ಷಕವಾಗಿ ಮಾತನಾಡಿ ಅವರಿಂದ ಹಣವನ್ನು ತನ್ನ ಖಾತೆಗೆ ಜಮೆ ಮಾಡಿಸಿಕೊಳ್ಳುತ್ತಿದ್ದ.
ತಮ್ಮ ಹೆಸರಿನಲ್ಲೇ ಫೇಕ್ ಐಡಿ ಸೃಷ್ಟಿಸಿ ವಂಚನೆ ಎಸಗುತ್ತಿರುವುದು ಬೆಳಕಿಗೆ ಬಂದಾಗ, ಸಂತ್ರಸ್ತ ಮಹಿಳೆಯರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಹಿಳೆಯರ ವೀಡಿಯೋಗಳನ್ನು ಬಂಡವಾಳ ಮಾಡಿಕೊಂಡು ಸುಲಭವಾಗಿ ಹಣ ಸಂಪಾದಿಸಲು ಯತ್ನಿಸುತ್ತಿದ್ದ ಆರೋಪಿಯ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪೋಸ್ಟ್ ಮಾಡುವವರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.
Arakshakara Times Media
Related posts
