ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವಿರುದ್ಧ ತೀವ್ರವಾಗಿ ನಡೆಯುತ್ತಿರುವ ನೆಗೆಟಿವ್ ಕಮೆಂಟ್ ಹಾಗೂ ಟ್ರೋಲಿಂಗ್ ವಿರುದ್ಧ ಬಿಗ್ ಬಾಸ್ ಕನ್ನಡ ಖ್ಯಾತಿಯ ಧ್ರುವಂತ್ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇತ್ತೀಚೆಗಷ್ಟೇ ಧ್ರುವಂತ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿರುವ ನೆಗೆಟಿವ್ ಕಾಮೆಂಟ್ಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದರು. ಇದಾದ ಬಳಿಕ ಅವರ ವಿರುದ್ಧ ಟ್ರೋಲ್ಗಳ ಪ್ರಮಾಣ ಮತ್ತಷ್ಟು ಹೆಚ್ಚಾಗಿತ್ತು ಎನ್ನಲಾಗಿದೆ.
ತಮ್ಮ ತೇಜೋವಧೆ ಮಾಡುವ ರೀತಿಯಲ್ಲಿ ಕೆಟ್ಟದಾಗಿ ಟ್ರೋಲ್ ಮಾಡುತ್ತಾ ನಿಂದಿಸುತ್ತಿರುವವರ ನಡೆಗೆ ಬೇಸತ್ತಿರುವ ಅವರು, ಇದರಿಂದ ತಮಗೆ ತೀವ್ರ ಮಾನಸಿಕ ಕಿರುಕುಳವಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಿರುವ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.