ಬೆಂಗಳೂರು: ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಕರಣದ ಮುಖ್ಯ ತನಿಖಾಧಿಕಾರಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಲೋಕೇಶ್ ಬಿ. ಜಗಲಾಸರ್ ಅವರನ್ನು ನೇಮಕ ಮಾಡಲಾಗಿದೆ.
ಪ್ರಕರಣದ ತೀವ್ರತೆ ಹಾಗೂ ಗಂಭೀರತೆಯನ್ನು ಪರಿಗಣಿಸಿ ಎಸ್ಐಟಿ ಮುಖ್ಯಸ್ಥ ಎನ್. ಶಶಿಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. ತನಿಖಾಧಿಕಾರಿಗೆ ಸಹಾಯಕ ತನಿಖಾಧಿಕಾರಿಯಾಗಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರನ್ನು ನೇಮಿಸಲಾಗಿದ್ದು, ಓರ್ವ ಐಪಿಎಸ್ ಹಾಗೂ ಓರ್ವ ಕೆಎಸ್ಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ತನಿಖೆ ಮುಂದುವರಿಯಲಿದೆ.
ತನಿಖಾಧಿಕಾರಿಯ ಹಿನ್ನೆಲೆ:
ಪ್ರಕರಣದ ತನಿಖೆಗೆ ತಾಂತ್ರಿಕ ಕ್ಷಮತೆ ಹೊಂದಿರುವ (Technically Capable) ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಇಂಜಿನಿಯರಿಂಗ್ ಪದವೀಧರರಾಗಿರುವ ಲೋಕೇಶ್ ಬಿ. ಜಗಲಾಸರ್ ಅವರು ಈ ಹಿಂದೆ ಬಾಗಲಕೋಟೆ ಹಾಗೂ ಧಾರವಾಡದಲ್ಲಿ ಎಸ್ಪಿಯಾಗಿ ಮತ್ತು ಬೆಂಗಳೂರು ನಗರದಲ್ಲಿ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ಸಿಐಡಿಯಲ್ಲಿ (CID) ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿರುವ ಇವರು, ಬೆಂಗಳೂರಿನಲ್ಲಿ ನಡೆದಿದ್ದ ₹7 ಕೋಟಿ ದರೋಡೆ ಪ್ರಕರಣ ಸೇರಿದಂತೆ ಹಲವು ಸಂಕೀರ್ಣ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿದ್ದರು.
Arakshakara Times Media
Related posts
