ವಿರಾಜಪೇಟೆ: ಪರಿಸರ ಸಂರಕ್ಷಣೆಯ ಹಿತದೃಷ್ಟಿಯಿಂದ ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ೨ ಲೀಟರ್‌ಗಿಂತ ಕಡಿಮೆ ಪ್ರಮಾಣದ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ, ಶೇಖರಣೆ ಹಾಗೂ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಸರ್ಕಾರ ಈಗಾಗಲೇ ನಿಷೇಧಿಸಿರುವ ಪ್ಲಾಸ್ಟಿಕ್ ಕವರ್‌ಗಳು, ಇಯರ್ ಬಡ್ಸ್, ಸ್ಟ್ರಾ ಪೈಪ್, ಕ್ಯಾಂಡಿ ಮತ್ತು ಐಸ್‌ಕ್ರೀಮ್ ಕಡ್ಡಿಗಳು, ಅಲಂಕಾರಿಕ ವಸ್ತುಗಳು, ಪ್ಯಾಕಿಂಗ್ ಸಾಮಗ್ರಿಗಳು ಹಾಗೂ ಆಮಂತ್ರಣ ಪತ್ರಿಕೆಗಳ ಸಾಲಿಗೆ ಇದೀಗ ಸಣ್ಣ ಪ್ರಮಾಣದ ನೀರಿನ ಬಾಟಲಿಗಳನ್ನೂ ಸೇರಿಸಲಾಗಿದೆ.
ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ:
೨ ಲೀಟರ್‌ಗಿಂತ ಕಡಿಮೆ ಸಾಮರ್ಥ್ಯದ ನೀರಿನ ಬಾಟಲಿಗಳನ್ನು ಸಂಗ್ರಹಿಸಿಡುವುದು, ಉಪಯೋಗಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಭಾರಿ ದಂಡ ವಿಧಿಸುವುದರ ಜೊತೆಗೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ನಾಚಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.
Arakshakara Times Media
ANTONY RAJU. A (M. A, Diploma in Journalism )
Editor In Chief / Journalist.
ARAKSHAKARA TIMES MEDIA
KARNATAKA